ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಕುರಿತಂತೆ ಸ್ವತಃ ತಮ್ಮ ನಿವಾಸದಲ್ಲಿ ಮಾತನಾಡಿರುವ ಯಡಿಯೂರಪ್ಪ, ನಾನು ಪ್ರತಿಪಕ್ಷ ನಾಯಕನಾಗಿರುವ ಕಾರಣ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯತೆ ಇಲ್ಲ. ಇಂದು ಸಂಜೆ 6ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ. ಇದಕ್ಕಾಗಿ ರಾಜ್ಯಪಾಲರ ಅನುಮತಿ ಕೋರಲಾಗಿದೆ ಎಂದಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಇಂದೇ ಪ್ರಮಾಣವಚನ ಸ್ವೀಕರಿಸಲು ಅವಕಾಶ ಕೋರುವಂತೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಸರ್ಕಾರ ರಚನೆಯ ಹಕ್ಕು ಮಂಡಿಸಲು ಮನವಿ ಸಲ್ಲಿಸಲಿದ್ದಾರೆ.
SWR Vigilance Dept Organizes Inter-School Competitions to Promote Integrity & Ethical Values
Kalpa Media House | Hubballi | The Vigilance Department of South Western Railway (SWR) organized a series of inter-school competitions...
Read moreDetails






