ಕಲ್ಪ ಮೀಡಿಯಾ ಹೌಸ್ | ಯಲ್ಲಾಪುರ |
ಹಣ್ಣು ತರಕಾರಿಯೊಟ್ಟಿಗೆ ಜನರನ್ನು ಹೊತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಭೀಕರ ಅಪಘಾತ #Terrible Accident ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 63ರಲ್ಲಿ #National Highway 63 ಅಪಘಾತಕ್ಕೀಡಾದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿದ್ದು ಎನ್ನಲಾಗಿದ್ದು, ಘಟನೆ ವೇಳೆ ಲಾರಿಯಲ್ಲಿ ಒಟ್ಟು 28 ಮಂದಿ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.
ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆ ಹೇಗಾಯ್ತು?
ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಪರಿಣಾಮ 9 ಮಂದಿ ವ್ಯಾಪಾರಿಗಳು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾನೆ.
ಘಟನೆಯಲ್ಲಿ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತಷ್ಟು ಜನರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post