ಲಕ್ನೋ: ಗೋಹತ್ಯೆ ಸಂಬಂಧಿತವಾಗಿ ನಡೆದ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಸಿಂಗ್ ಅವರನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ಯೋಗೇಶ್ ರಾಜನನ್ನು ಇಂದು ಬಂಧಿಸಲಾಗಿದೆ.
ಡಿಸೆಂಬರ್ ನಲ್ಲಿ ನಡೆದಿದ್ದ ಬುಲಂದ್‌ಶಹರ್ ಗುಂಪು ಘರ್ಷಣೆಯಲ್ಲಿ ಹಾಡಹಗಲೇ ಪೋಲೀಸ್ ಅಧಿಕಾರಿ ಹತ್ಯೆ ನಡೆದಿದ್ದು ದೇಶಕ್ಕೆ ದೇಶವೇ ಬೆಚ್ಚಿ ಬೀಳುವಂತಾಗಿತ್ತು. ಈ ಘಟನೆಯಲ್ಲಿ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಮತ್ತು 20 ವರ್ಷದ ಸುಮಿತ್ ಮೃತಪಟ್ಟಿದ್ದರು.
ಘಟನೆ ನಂತರ ತಲೆಮರೆಸಿಕೊಂಡಿದ್ದ ರಾಜ್ ನನ್ನು ಹೇಗಾದರೂ ಮಾಡಿ ಹಿಡಿಯಲೇಬೇಕು ಎಂದು ಬಜರಂಗದಳದ ಕಾರ್ಯಕರ್ತರು ಹುಡುಕಾಡುತ್ತಿದ್ದರು. ಅಂತಿಮವಾಗಿ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಪೊಲೀಸರಿಗೆ ಒಪ್ಪಿಸಲಾಗಿದೆ.







