ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಪತ್ರೊಡೆ ಎಲೆ ಕೀಳಲು ಮರ ಏರಿದ್ದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು (Power Shock) ಮೃತಪಟ್ಟಿರುವ ದುರ್ಘಟನೆ ತೀರ್ಥಹಳ್ಳಿ ಬಳಿಯ ಲಕ್ಕುಂದ ಸಮೀಪ ಸಂಭವಿಸಿದೆ.
ಮೃತ ಯುವಕನನ್ನು ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದ್ದು ತೀರ್ಥಹಳ್ಳಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾರೆ.
Also Read>> ಉತ್ಪನ್ನ ಆಧಾರಿತ ಭಾರತದ ಕನಸಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಬಲ: ಡೀನ್ ಡಾ. ಸೋಮಶೇಖರ್
ಮೃತ ಯುವಕನಿಗೆ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಬಂಧು-ಬಳಗದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ಪತ್ರೊಡೆ ಎಲೆ ಕೀಳುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಗೊಂಡು ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ : Whatsapp: 9008761663, 9481252093 – info@kalpa.news










