ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯುವತಿಯೊಬ್ಬಳು ಮನೆಯ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರದ ಕೀರ್ತಿನಗರ ಬಡಾವಣೆಯ 1ನೇ ಕ್ರಾಸ್ ನಿವಾಸಿ ರಂಜಿತಾ (22) ಮೃತಪಟ್ಟವರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Also read: Lokayukta Raid | ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಭದ್ರಾವತಿ ಪ್ರಾಂಶುಪಾಲ
ಇನ್ನು, ವಿಷಯ ತಿಳಿದ ತಕ್ಷಣ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










