ನವದೆಹಲಿ: ಲೋಕಸಭೆಗೆ ಕೊನೆಯ ಹಂತದ ಮತದಾನ ಇಂದು ಆರಂಭವಾಗಿರುವ ಬೆನ್ನಲ್ಲೇ ಹೆಚ್ಚು ಸಂಖ್ಯೆಯಲ್ಲಿ ದೇಶವಾಸಿಗಳು ಮತದಾನ ಮಾಡುವಂತೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಒಂದು ಮತ ದೇಶದ ಅಭಿವೃದ್ಧಿಯ ಪಥವನ್ನೇ ಬದಲಿಸಲಿದೆ ಎಂದಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಲೋಕಸಭೆಗೆ ಇಂದು ಕೊನೆಯ ಹಂತದ ಮತದಾನ ಆರಂಭವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನವಾಗುವಂತೆ ಇಂದಿನ ಹಕ್ಕುದಾರರು ಮುಂದಾಗಬೇಕು. ನಿಮ್ಮ ಒಂದು ಮತ ದೇಶದ ಅಭಿವೃದ್ಧಿಯ ಪಥವನ್ನೇ ಬದಲಾವಣೆ ಮಾಡಲಿದೆ. ಮೊದಲ ಬಾರಿಗೆ ಮತದಾನ ಮಾಡುತ್ತಿರುವವರೂ ಸಹ ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಾರೆ ಎಂಬ ಭಾವಿಸುತ್ತೇನೆ ಎಂದಿದ್ದಾರೆ.
Today is the final phase of the 2019 Lok Sabha elections. I urge all those voting in this phase to vote in record numbers. Your one vote will shape India’s development trajectory in the years to come. I also hope first time voters vote enthusiastically.
— Chowkidar Narendra Modi (@narendramodi) May 19, 2019
ಒಟ್ಟು 8 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಉತ್ತರ ಪ್ರದೇಶ ಮತ್ತು ಪಂಜಾಬ್’ನ ತಲಾ 13 ಕ್ಷೇತ್ರಗಳು, ಪಶ್ಚಿಮ ಬಂಗಾಳದ 9, ಬಿಹಾರ ಮತ್ತು ಮಧ್ಯಪ್ರದೇಶದ ತಲಾ ಕ್ಷೇತ್ರಗಳು, ಹಿಮಾಚಲ ಪ್ರದೇಶದ ನಾಲ್ಕು, ಜಾರ್ಖಂಡ್’ನ ಮೂರು ಮತ್ತ ಕೇಂದ್ರಾಡಳಿತ ಪ್ರದೇಶ ಚಂಡೀಘಡದ ಒಂದು ಕ್ಷೇತ್ರ ಸೇರಿದಂತೆ ಒಟ್ಟು 59 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಪ್ರಮುಖವಾಗಿ ವಾರಣಾಸಿ ಕ್ಷೇತ್ರದಿಂದ 2ನೆಯ ಬಾರಿಗೆ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯ ವನ್ನು ಒಟ್ಟು 10.01 ಲಕ್ಷ ಮತದಾರರು ನಿರ್ಧರಿಸಲಿದ್ದಾರೆ.
Discussion about this post