ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಇಂದು ಮುಂಜಾನೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ವೀರಸ್ವರ್ಗ ಸೇರಿದ ಭಾರತೀಯ ಸೇನೆಯ ಐವರು ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ಹುತಾತ್ಮರಾದ ಧೈರ್ಯವಂತ ಯೋಧರು ಮತ್ತು ಭದ್ರತಾ ಸಿಬ್ಬಂದಿಗೆ ಗೌರವ ನಮನಗಳು. ಅವರ ತ್ಯಾಗ ಮತ್ತು ಶೌರ್ಯ ಎಂದಿಗೂ ಮರೆಯಲಾಗದು ಎಂದಿದ್ದಾರೆ.
Tributes to our courageous soldiers and security personnel martyred in Handwara. Their valour and sacrifice will never be forgotten. They served the nation with utmost dedication and worked tirelessly to protect our citizens. Condolences to their families and friends.
— Narendra Modi (@narendramodi) May 3, 2020
ಅಲ್ಲದೇ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ಈ ಯೋಧರ ಕುಟುಂಬಗಳಿಗೆ ಹಾಗೂ ಅವರ ಸ್ನೇಹಿತರಿಗೆ ಪ್ರಧಾನಿಯವರು ಸಾಂತ್ವಾನ ಹೇಳಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post