No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga JNNCE ‘ಯುಗ್ಮಾ ಟೆಕ್‌ಫೆಸ್ಟ್-2.0’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್

kalpa News by kalpa News
July 22, 2026
in ಶಿವಮೊಗ್ಗ
0
ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್‌ ಕಾಲೇಜಿನ (JNNCE) ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಜುಲೈ 24 ಮತ್ತು 25ರಂದು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0 (Yugma TechFest-2.0) ಮೇದದೃಷ್ಟಿ’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್ (National-Level AI Hackathon) ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ತಿಳಿಸಿದರು.

ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ನವೋದ್ಯಮ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಈ ಹ್ಯಾಕಥಾನ್ ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ಹಗಲು-ರಾತ್ರಿ ನಿರಂತರವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
JNNCE Shivamoggaಹ್ಯಾಕಥಾನ್‌ನ ಮೊದಲ ದಿನ ತಂಡಗಳಿಗೆ ಎರಡು ಪ್ರಮುಖ ವಿಭಾಗಗಳಲ್ಲಿ ಸವಾಲಿನ ವಿಷಯಗಳನ್ನು ನೀಡಲಾಗುತ್ತದೆ. ಮೊದಲ ವಿಭಾಗ, ‘ಕೃತಕ ಬುದ್ಧಿಮತ್ತೆ ಮೂಲಕ ವೈದ್ಯಕೀಯ ಚಿತ್ರಗಳ ಗುಣಮಟ್ಟ ಸುಧಾರಣೆ’ (AI for Medical Image Enhancement) ವಿಷಯದಲ್ಲಿ ಎಕ್ಸ್-ರೇ, ಎಂಆರ್‌ಐ, ಸಿಟಿ ಸ್ಕ್ಯಾನ್ ಮೊದಲಾದ ವೈದ್ಯಕೀಯ ಚಿತ್ರಗಳನ್ನು ಕೃತಕ ಬುದ್ಧಿಮತ್ತೆಯ ನೆರವಿನಿಂದ ವಿಶ್ಲೇಷಿಸಿ, ಟ್ಯೂಮರ್ ಪತ್ತೆ, ಅಂಗಾಂಗಗಳ ವಿಭಜನೆ, ದೇಹದ ಅಸಹಜತೆಗಳ ಗುರುತಿಸುವಿಕೆ ಹಾಗೂ ವರ್ಗೀಕರಣದ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಉಪಯುಕ್ತವಾಗುವ ನವೀನ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಸವಾಲು ನೀಡಲಾಗುತ್ತದೆ.

Also read>> State Level Volleyball tournament | ಕ್ರೈಸ್ಟ್‌ಕಿಂಗ್ ಬಾಲಕಿಯರ ತಂಡ ಪ್ರಥಮ

ಎರಡನೇ ವಿಭಾಗ ‘ವಸ್ತು ಗುರುತಿಸುವಿಕೆಗಾಗಿ ಕೃತಕ ಬುದ್ಧಿಮತ್ತೆ’ (AI for Object Recognition) ವಿಷಯದಲ್ಲಿ, ನೈಜ ಪರಿಸರದಲ್ಲಿ ವಸ್ತುಗಳನ್ನು ಪತ್ತೆಹಚ್ಚುವ ಹಾಗೂ ವರ್ಗೀಕರಿಸುವ ಬುದ್ಧಿವಂತ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಸವಾಲನ್ನು ಒಳಗೊಂಡಿದೆ. ಸ್ವಯಂಚಾಲಿತ ವಾಹನಗಳು, ಸ್ಮಾರ್ಟ್ ಸರ್ವೇಲೆನ್ಸ್, ಕೈಗಾರಿಕೆಗಳ ಗುಣಮಟ್ಟ ಪರಿಶೀಲನೆ ಸೇರಿದಂತೆ ವಿವಿಧ ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ ಆಧಾರಿತ ಪರಿಹಾರಗಳನ್ನು ರೂಪಿಸಲಿದ್ದಾರೆ ಎಂದು ತಿಳಿಸಿದರು.

ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವ ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳ ರೂಪದಲ್ಲಿ ಒಟ್ಟು ಸುಮಾರು ₹2 ಲಕ್ಷ ನಗದು ಬಹುಮಾನ ವಿತರಿಸಲಾಗುವುದು.
ಜುಲೈ 24ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಖ್ಯಾತ ಉದ್ಯಮಿ ಎಸ್. ರುದ್ರೇಗೌಡ ಉದ್ಘಾಟಿಸಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ಹಾಗೂ ಡಾ. ರಾಘವೇಂದ್ರ ಆರ್.ಜೆ. ಉಪಸ್ಥಿತರಿರುವರು.

ಜುಲೈ 25ರಂದು ಶನಿವಾರ ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕರಾದ ಡಾ. ಅರ್ಚನಾ ಮತೂರ್ ಸಮಾರೋಪ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಘಟನಾ ಸಮಿತಿಯ ಸದಸ್ಯರಾದ  ಡಾ. ರಾಘವೇಂದ್ರ ಆರ್.ಜೆ, ಡಾ. ಪವನ್ ಕುಮಾರ್ ಎಂ.ಪಿ., ಡಾ. ಸಂಜೀವ್ ಕುಂಟೆ, ಅರುಣ್ ಕುಮಾರ್ ಪಿ., ಮನೀಷಾ ಕೆ.ಎಂ. ಹಾಗೂ ವಿಶೃತ ರಾಣಿ ಎಸ್.ಎನ್ ಉಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalpa News Advertising DisclaimerKalahamsa Infotech private limited      

Tags: 'Yugma TechFest-2.0'Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNational-Level AI HackathonNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

State Level Volleyball tournament | ಕ್ರೈಸ್ಟ್‌ಕಿಂಗ್ ಬಾಲಕಿಯರ ತಂಡ ಪ್ರಥಮ

Next Post

Thirthahalli | ದಸರಾ ಹುಲಿವೇಷ ಕಲಾವಿದ ಆತ್ಮಹತ್ಯೆ

kalpa News

kalpa News

Next Post
udupi 82-year-old-woman-dies-by-suicide

Thirthahalli | ದಸರಾ ಹುಲಿವೇಷ ಕಲಾವಿದ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL