ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಗೆ #Yuvanidhi ಇಂದು ನಗರದ ಫ್ರೀಡಂ ಪಾರ್ಕ್’ನಲ್ಲಿ #FreedomPark ಚಾಲನೆ ನೀಡಲಾಗುತ್ತಿದ್ದು, ಇದರ ಪರಿಣಾಮವಾಗಿ ನಗರದ ಕೆಲವು ಕಡೆ ಸಂಚಾರ ದಟ್ಟಣೆ ಕಂಡುಬಂದಿದೆ.
ಫ್ರೀಡಂ ಪಾರ್ಕ್’ನಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ರಾಜ್ಯದ ವಿವಿದೆಢೆಗಳಿಂದ ಸಾವಿರಾರು ಮಂದಿ ಆಗಮಿಸಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಂದ ನೂರಾರು ಬಸ್’ಗಳ ವ್ಯವಸ್ಥೆ ಮಾಡಲಾಗಿದೆ.

ಯುವನಿಧಿ ಕಾರ್ಯಕ್ರಮಕ್ಕೆ ಜನರನ್ನು ಹೊತ್ತ ಸರ್ಕಾರಿ ಬಸ್’ಗಳು #GovernmentBus ಹಾಗೂ ನಿಗದಿತ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್’ಗಳು ತೀರ್ಥಹಳ್ಳಿ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸಿದ್ದು ಕಂಡುಬಂದಿದೆ. ನಗರದ ಕೆಲವು ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಿದ್ದ ಹಿನ್ನೆಲೆಯಲ್ಲಿ ಹೊರಕ್ಕೆ ಸಂಪರ್ಕಿಸುವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಿತ್ತು.
ಅಲ್ಲದೇ, ಬೈಪಾಸ್ ರಸ್ತೆಯ ತಿರುವಿನಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಇದರಲ್ಲಿ ಸರ್ಕಾರಿ ಬಸ್’ಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದುದು ಕಂಡು ಬಂದಿತು. ಈ ಭಾಗದಲ್ಲಿ ಕೆಲವು ಕಾಲ ಟ್ರಾಫಿಕ್ ಜಾಮ್ ಆಗಿದ್ದು ಸಹ ಕಂಡುಬಂದಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post