Read - < 1 minute
ಬೆಂಗಳೂರು, ಅ.20: ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿ ಪರಾರಿಯಾದ ಇಬ್ಬರು ಆರೋಪಿಗಳ ಫೋಟೋವನ್ನು ಬೆಂಗಳೂರು ಪೊಲೀಸರು ಇಂದು ಬಿಡುಗಡೆ ಮಾಡಿದ್ದಾರೆ.
ಪಲ್ಸರ್ ಬೈಕ್ನಲ್ಲಿ ಹೆಲ್ಮೆಟ್ ಧರಿಸಿ ತೆರಳುತ್ತಿದ್ದ ಫೋಟೋ ಸಿಸಿಬಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಎಲ್ಲಾ ಪೊಲೀಸ್ ಠಾಣೆಗಳಿಗೂ ಆರೋಪಿಗಳ ಫೋಟೋ ರವಾನಿಸಿದ್ದಾರೆ.
ಸಿಸಿಟಿವಿಯಲ್ಲಿ ದಾಖಲಾಗಿದ್ದ ವಿಡಿಯೋ ದೃಶ್ಯಾವಳಿಯಲ್ಲಿರುವ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೂ ರವಾನಿಸಲಾಗಿದೆ. ಜೊತೆಗೆ ಪಕ್ಕದ ರಾಜ್ಯಗಳ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ಎಡು ವಿಶೇಷ ತಂಡಗಳನ್ನು ರಚಿಸಿದ್ದು, ನಗರದ ಹೊರವಲಯದಲ್ಲಿ ಕಂಡು ಬರುವ ಅನುಮಾನಾಸ್ಪದ ವ್ಯಕ್ತಿಗಳ ಫೋನ್ ಕರೆಗಳನ್ನು ಟ್ರ್ಯಾಪ್ ಮಾಡುವಂತೆ ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Discussion about this post