Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕಾವೇರಿ ವಿವಾದ: ಪ್ರಮುಖ ಬೆಳವಣಿಗೆಗಳ ಸುದ್ಧಿ ಒಂದೇ ಕಡೆ

September 13, 2016
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 5 minutes

ಹಿಂಸಾಚಾರದಿಂದ ನ್ಯಾಯ ಸಿಗದು: ಶಾಂತಿ ಕಾಪಾಡುವಂತೆ ವೆಂಕಯ್ಯ ನಾಯ್ಡು ಮನವಿ

ನವದೆಹಲಿ, ಸೆ.13: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡು ಉಭಯ ರಾಜ್ಯಗಳಲ್ಲೂ ಶಾಂತಿ ಕಾಪಾಡುವಂತೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮನವಿ ಮಾಡಿದ್ದಾರೆ.
ಕಾವೇರಿ ವಿವಾದದಿಂದ ಉಭಯರಾಜ್ಯಗಳಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಿಂಸಾಚಾರದಿಂದ ಪರಿಹಾರ ಸಿಗುವುದಿಲ್ಲ. ಶಾಂತಿ ಕಾಪಾಡಿ. ಪ್ರತಿಭಟನೆ ಹೆಸರಲ್ಲಿ ಹಿಂಸಾಚಾರ ಸಹಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಹಿಂಸಾಚಾರ, ಪ್ರತಿಭಟನೆ. ಆಸ್ತಿ-ಪಾಸ್ತಿ ನಾಶ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗುವುದರೊಂದಿಗೆ ಜನಸಾಮಾನ್ಯರ ಸ್ಥಿತಿ ದುಸ್ಥರವಾಗುತ್ತದೆ. ಸಾರ್ವಜನಿಕರಿಗೆ ತೊಂದರೆಯುಂಟಾಗಿತ್ತದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳ ಜನತೆ ತಾಳ್ಮೆ ಕಾಯ್ದುಕೊಂಡು ಕಾನೂನಿನ ರೀತಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಯೋಚಿಸಬೇಕು ಎಂದು ಸಲಹೆ ನಿಡಿದರು.
ಕಾವೇರಿ ನದಿ ನೀರಿನ ವಿಚಾರ ಸೂಕ್ಷ್ಮ ವಿಷಯವಾಗಿದ್ದು, ಸುಪ್ರೀಂ ಕೋರ್ಟ್, ಉಭಯ ರಾಜ್ಯಗಳ ವಾದಗಳನ್ನು ಆಲಿಸಿ ಆದೇದೇಶ ಹೊರಡಿಸಿದೆ. ಉಭಯ ರಾಜ್ಯಗಳ ನಾಯಕರು ಮಾತುಕತೆಯಮೂಲಕ, ಕಾನೂನಿನ ರೀತಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಲ್ಲೂ ದೊಡ್ಡ ಸಂಖ್ಯೆಯಲ್ಲಿ ಪರಸ್ಪರ ರಾಜ್ಯಗಳ ಜನತೆ ವಾಸಿಸುತ್ತಿದ್ದಾರೆ. ಗಲಭೆ- ಹಿಂಸಾಚಾರದಿಂದಾಗಿ ಉಭಯ ರಾಜ್ಯಗಳ ಜನತೆ ಅಭದ್ರತೆ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಶಾಂತಿ ಕಾಪಾಡಿ, ಸಂವಿಧಾನದ ಚೌಕಟ್ಟಿನಲ್ಲಿ ಸಮಸ್ಯೆ ನಿವಾರಿಸಿಕೊಳ್ಳಲು ಆಲೋಚಿಸಬೇಕು ಎಂದು ಹೇಳಿದರು.
ಯಾವುದೇ ವಿವಾದವನ್ನು ರಸ್ತೆಯಲ್ಲಿ ಬಗೆಹರಿಸಲು ಸಾಧ್ಯವಿಲ್ಲ. ಯಾರೂ ಜನರನ್ನು ಪ್ರಚೋದಿಸುವ ಕೆಲಸ ಮಾಡಬಾರದು ಎಂದ ಅವರು, ಕರ್ನಾಟಕ ಹಾಗೂ ತಮಿಳುನಾಡು ಜನರು ಶಾಂತಿ ಕಾಪಾಡುವಂತೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮನವೊಲಿಸಬೇಕು ಎಂದು ತಿಳಿಸಿದರು.

ಕಾವೇರಿ ಗಲಭೆ: ರಾಜ್ಯಕ್ಕೆ ವಿಶೇಷ ಅರೆಸೈನಿಕ ಪಡೆ ರವಾನಿಸಿದ ಕೇಂದ್ರ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಆರಂಭಿಸಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು. ಬೆಂಗಳೂರಿನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.
ಉಭಯ ರಾಜ್ಯಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸಹಕರಿಸಲಿದೆ ಎಂದು ರಾಜನಾಥ ಸಿಂಗ್ ಕರ್ನಾಟಕ ಮತ್ತು ತಮಿಳು ನಾಡು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ವಿಶೇಷ ಅರೆಸೈನಿಕ ಪಡೆಯ ಸಾವಿರ ಸಿಬ್ಬಂದಿಯನ್ನು ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳುಹಿಸಿದೆ. ಕರ್ನಾಟಕದ ಗಲಭೆಪೀಡಿತ ಪ್ರದೇಶಗಳಿಗೆ ಸಿಬ್ಬಂದಿಯನ್ನು ಕಳುಹಿಸಲಾಗಿದ್ದು, ಅಗತ್ಯಬಿದ್ದರೆ ತಮಿಳು ನಾಡಿಗೂ ಕೂಡ ಕೇಂದ್ರ ಮೀಸಲು ಪೊಲೀಸ್ ಪಡೆಯ ಪುರುಷ ಮತ್ತು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಕಾವೇರಿ ವಿವಾದ: ಏರ್ ಏಷ್ಯಾ ಬದಲಾದ ವೇಳಾಪಟ್ಟಿ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಹಿಂಸಾಚಾರ ಆರಂಭವಾದ ಹಿನ್ನಲೆಯಲ್ಲಿ ನಿಷೇಧಾಜ್ನೆ ಜಾರಿಗೊಳಿಸಲಾಗಿದೆ. ಈ ನಡುವೆ ಏರ್ ಏಷ್ಯಾ ವಿಮಾನ ಮತ್ತೊಮ್ಮೆ ಪ್ರಯಾಣಿಕರ ಹಿತ ಕಾಪಾಡಲು ಮುಂದಾಗಿದ್ದು, ಬದಲಾದ ವೇಳಾ ಪಟ್ಟಿಯಲ್ಲಿ ಸಂಚರಿಸುಪ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.
ಸೆಪ್ಬಂಬರ್ 13 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ತೆರಳಲು ಪ್ರಯಾಣಿಕರು ಟಿಕೆಟ್ ಬುಕ್ ಮಾಡಿದ್ದರು. ಆದರೆ ಕಾವೇರಿ ಗಲಾಟೆಯಿಂದಾಗಿ ಪ್ರಯಾಣಿಸಲು ಸಾಧ್ಯವಾಗಿಲ್ಲ,. ಈ ಹಿನ್ನೆಲೆಯಲ್ಲಿ ಈಗ ಬುಕ್ ಮಾಡಿರುವ ಟಿಕೆಟ್ ನಲ್ಲೇ ಮುಂದಿನ 72 ಗಂಟೆಗಳಲ್ಲಿ ಮತ್ತೆ ಪ್ರಯಾಣಿಸಬಹುದಾಗಿದೆ ಎಂದು ಏರ್ ಏಷ್ಯಾ ಸಂಸ್ಥೆ ತಿಳಿಸಿದೆ.
ಬೆಂಗಳೂರಿನಲ್ಲಿ ಉಂಟಾಗಿರುವ ಹಿಂಸಾಚಾರ ಹಾಗೂ ಗಲಭೆಯಿಂದಾಗಿ ನಗರದಲ್ಲಿ ಸಮಸ್ಯೆ ಉಂಟಾಗಿದ್ದು, ಸೆಪ್ಟಂಬರ್ 13ಕ್ಕೆ ಪ್ರಯಾಣ ಮಾಡಲು ನಿಗದಿಗೊಳಿಸಿದ್ದ ಟಿಕೆಟ್ ಅನ್ನು ರದ್ದುಗೊಳಿಸಿ ಮುಂದಿನ 72 ಗಂಟೆಗಳಲ್ಲಿ ಪ್ರಯಾಣಿಸಲು ಏರ್ ಇಂಡಿಯಾ ವಿಮಾನ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗುವುದು. ಈ ಸಂಬಂಧ ಪ್ರಯಾಣಿಕರು ನಮ್ಮ ಸಂಸ್ಥೆಯ ಕಾಲ್ ಸೆಂಟರ್ ಗಳಿಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

ಕನ್ನಡದ ನಟ-ನಟಿಯರಿಗೆ ಭದ್ರತೆ

ಚೆನ್ನೆ: ಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ನೆಲೆಯೂರಿರುವ ಕನ್ನಡ ಮೂಲದ ನಟ ನಟಿಯರಿಗೆ ಆ ರಾಜ್ಯ ಸರ್ಕಾರ ಸೂಕ್ತ ಭದ್ರತೆ ಒದಗಿಸಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಜಯಲಲಿತಾ ಸರ್ಕಾರ ಭದ್ರತೆ ಹೆಚ್ಚಿಸಿದೆ. ರಜನಿ ಕರ್ನಾಟಕ ಮೂಲದವರು. ಆದ್ದರಿಂದ ಭದ್ರತೆ ಹೆಚ್ಚಿಸಲಾಗಿದೆ. ರಜನಿ ಜೊತೆಗೆ ಪ್ರಭುದೇವ ಮತ್ತಿತರ ಕರ್ನಾಟಕ ಮೂಲದ ನಟರ ಮನೆಗಳಿಗೆ ಭದ್ರತೆ ನೀಡಲಾಗಿದೆ.
ಕನ್ನಡಿಗರು, ತಮಿಳರ ನಡುವೆ ಪರಿಸ್ಥಿತಿ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಜಯಲಲಿತಾ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ. ಆದರೂ ಇಂಟಲಿಜೆನ್ಸ್ ಮೂಲಗಳು ಈ ನಟರ ಮೇಲೆ, ಮನೆಗಳ ಮೇಲೆ ದಾಳಿ ನಡೆಯಬಹುದು ಎಂಬ ಎಚ್ಚರಿಕೆ ನೀಡಿರುವುದರಿಂದ ತಮಿಳುನಾಡು ಸರ್ಕಾರ ಭದ್ರತೆಗೆ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಕರ್ಫ್ಯೂ ಮುಂದುವರಿಕೆ: 16 ಮಂದಿ ಬಂಧನ

ಕಾವೇರಿ ಹೋರಾಟ ತೀವ್ರಗೊಂಡಿರುವ ಹಿನ್ನಲೆಯಲ್ಲಿ 16 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರಿಸಲಾಗಿದೆ. ಕರ್ಫ್ಯೂ ನಡುವೆಯೂ ಹೆಗ್ಗನಹಳ್ಳಿಯಲ್ಲಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ 30 ಕ್ಕೂ  ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರವಾಯು ಪ್ರಯೋಗಿಸಲಾಯಿತು.
ಇನ್ನು ಪ್ರತಿಭಟನೆ ಹತ್ತಿಕ್ಕುವವರು ಎಂಬ ಅನುಮಾನ ಕಂಡುಬಂದರೂ ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು 15 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಗುಂಡೇಟಿಗೆ ಬಲಿಯಾದ ಉಮೇಶ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

ಪೊಲೀಸ್ ಗುಂಡಿಗೆ ನಿನ್ನೆ ಬಲಿಯಾದ ತುಮಕೂರಿನ ಉಮೇಶ್ಗೆ ರಾಜ್ಯ ಸಕರ್ಾರದಿಂದ 10 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ಇದರ ಜತೆ ವಿವಿಧ ಸಂಘಟನೆಗಳು ಕೂಡ ಪರಿಹಾರ ಘೋಷಿಸಿವೆ.
ರಾಜ್ಯ ಸರ್ಕಾರ ಮೊದಲು ಐದು ಲಕ್ಷ ರೂ. ಪರಿಹಾರ ಘೋಷಿಸಿತ್ತು. ಆದರೆ ಕುಟುಂಬ ಸದಸ್ಯರ ಒತ್ತಾಯದ ಹಿನ್ನೆಲೆ ಇದೀಗ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ.
ಪತ್ನಿಗೆ ಉದ್ಯೋಗ, ಮಕ್ಕಳಿಗೆ ವಿದ್ಯಾಭ್ಯಾಸ:
ನಗರ ಜಿಲ್ಲಾಧಿಕಾರಿ ವಿ. ಶಂಕರ್ ಪರಿಹಾರ ಕುರಿತು ಮಾತನಾಡಿದ್ದು, ಮೃತ ಉಮೇಶ್ ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ಸರ್ಕಾರವೇ ಭರಿಸಲಿದೆ. ಮೃತನ ಪತ್ನಿಗೆ ಗುತ್ತಿಗೆ ಆಧಾರದ ಉದ್ಯೋಗ ನೀಡಲಾಗುವುದು. ಕಾಯಂ ಉದ್ಯೋಗ ನೀಡುವಂತೆ ಸಹ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇತರರ ನೆರವು:
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಉಮೇಶ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ವೈಯಕ್ತಿಕವಾಗಿ ಈ ಮೊತ್ತ ನೀಡಲಿದ್ದು, ಕಾವೇರಿ ಹೋರಾಟವನ್ನು ಶಾಂತಿಯುತವಾಗಿ ಆಚರಿಸುವಂತೆ ಮನವಿ ಮಾಡಿದ್ದಾರೆ.
ಹೋರಾಟದಿಂದ ಅಮಾಯಕರು ಬಲಿಯಾಗುವುದು ಬೇಡ. ಸಾರ್ವಜನಿಕ ಆಸ್ತಿಪಾಸ್ತಿಯನ್ನೂ ನಾಶಮಾಡಬೇಡಿ ಎಂದು ಅವರು ಮನವಿ ಮಾಡಿದ್ದಾರೆ. ನಾಗರಹಾವು ಚಿತ್ರತಂಡ ಉಮೇಶ್ ಕುಟುಂಬಕ್ಕೆ 2 ಲಕ್ಷ ರೂ. ನೆರವು ಘೋಷಿಸಿದೆ. ನಿರ್ಮಾಪಕ ಸಾಜಿದ್ ಖುರೇಶಿ ತಮ್ಮ ಸಿಂಹಹಸ್ತ ಸಂಘಟನೆ ಮೂಲಕ ಈ ನೆರವು ಘೋಷಿಸಿದ್ದಾರೆ.
ಉಮೇಶ್ ಕುಟುಂಬಕ್ಕೆ ತಲಾ 50 ಸಾವಿರ ರೂ. ನೆರವನ್ನು ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ ಬಣ ಹಾಗೂ ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಮುತ್ತಪ್ಪ ರೈ ಘೋಷಿಸಿದ್ದಾರೆ.
ಕನ್ನಡ ಒಕ್ಕೂಟ ಕರ್ನಾಟಕ ರಾಜ್ಯ ಸಂಘಟನೆ ಮುಖಂಡರಾದ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದು ಮತ್ತಿತರ ಮುಖಂಡರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದು 1 ಲಕ್ಷ ರೂ. ನೆರವು ನೀಡಿದ್ದಾರೆ. ನಟ ಪುನೀತ್ ರಾಜ್ಕುಮಾರ್ ಉಮೇಶ್ ಕುಟುಂಬಕ್ಕೆ 50 ಸಾವಿರ ರೂ. ನೆರವು ನೀಡಿದ್ದಾರೆ.

ಕಾವೇರಿ ಕಿಚ್ಚು- ಗಾಯಗೊಂಡವನೂ ಮೃತ

ಕಾವೇರಿ ಕಿಚ್ಚಿನ ಗಲಭೆಯಲ್ಲಿ ನಿನ್ನೆ ಲಾಠಿಚಾರ್ಜ್ ನಿಂದ ತಪ್ಪಿಸಿಕೊಳ್ಳಲು ಓಡುವ ಯತ್ನದಲ್ಲಿ ಗಾಯಗೊಂಡಿದ್ದ ಕುಮಾರ್ ಎಂಬಾತ ಆಸ್ಪತ್ರೆಯಲ್ಲಿ ಮೃತಪಡ್ಟಿದ್ದಾನೆ. ಇದರಿಂದ ಕಾವೇರಿ ಗಲಭೆಗೆ ಈವರೆಗೂ ಇಬ್ಬರ ಬಲಿಯಾದಂತಾಗಿದೆ.
ಸೋಮವಾರ ಪೊಲೀಸರು ಲಾಠಿಚಾರ್ಜ್ ಮಾಡುತ್ತಿದ್ದಾಗ ತಪ್ಪಿಸಿಕೊಳ್ಳಲು ಪಕ್ಕದ ಕಟ್ಟಡಕ್ಕೆ ಓಡಿದ್ದರು. ಮೂರನೆ ಮಹಡಿ ಹತ್ತಿದ ಅವರು ಮುಂದೆ ದಾರಿ ಕಾಣದೆ ಕೆಳಕ್ಕೆ ಜಿಗಿದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಲಕ್ಷ್ಮಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಮಾರ್  ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ಕೊನೆಯುಸಿರೆಳೆದರು.
ಮೃತರನ್ನು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನವರೆಂದು ತಿಳಿದು ಬಂದಿದೆ.ವಿಶೇಷವೆಂದರೆ ಕಾವೇರಿ ಗಲಭೆಗೆ ಮೃತಪಟ್ಟ ಇಬ್ಬರು ತುಮಕೂರು ಜಿಲ್ಲೆಗೆ ಸೇರಿದವರು. ಸೋಮವಾರ ರಾತ್ರಿ ಸಿಂಗೋನಹಳ್ಳಿಯ ಉಮೇಶ್ಗೌಡ ಎಂಬುವವರು ಗೋಲಿಬಾರ್ ಗೆ ಅಸುನೀಗಿದ್ದರು.
ತುಮಕೂರಿನ ಕುಣಿಗಲ್ನವರಾದ ಕುಮಾರ್ ಕಾವೇರಿ ಪ್ರತಿಭಟನೆಯಲ್ಲಿ ತೊಡಗಿದ್ದರು. ಸುಂಕದಕಟ್ಟೆಯ ಶ್ರೀಗಂಧ ಜಿಮ್ ಕಟ್ಟಡದ ಬಳಿ ಪ್ರತಿಭಟನೆ ತೀವ್ರಗೊಂಡ ವೇಳೆಯಲ್ಲಿ ಪೊಲೀಸರು ಗುಂಪು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡವನ್ನೇರಿದ ಕುಮಾರ್ ಕಟ್ಟಡದ ಮೂರನೇ ಮಹಡಿಯಿಂದ ಹಾರುವ ವೇಳೆ ಬಿದ್ದು ಗಾಯಗೊಂಡಿದ್ದರು.
ಸೊಂಟ, ಕಾಲು, ಮುಖದ ಮೂಳೆ ಮುರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಕುಮಾರ್ ಅವರನ್ನು ನಗರದ ಶ್ರೀಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಅಸುನೀಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ನಗರದಲ್ಲಿ ಬಾರ್ ಬೆಂಡಿಂಗ್ ಕೆಲಸಗಾರನಾಗಿದ್ದ ಕುಮಾರ್ ಅವರ ಪತ್ನಿ ಗರ್ಭಿಣಿ.
ಈ ವೇಳೆ ಕುಮಾರ್ ತನ್ನ ಪ್ರಾಣ ರಕ್ಷಣೆ ಮಾಡಿಕೊಳ್ಳುವ ವೇಳೆ ಕಟ್ಟಡ ಹತ್ತಲು ಮುಂದಾದಗ ಆಯಾ ತಪ್ಪಿ ಬಿದ್ದಿದ್ದರು. ಮಹಡಿಯಿಂದ ಬಿದ್ದ ಪರಿಣಾಮ ದೇಹದ ಪ್ರಮುಖ ಅಂಗಗಳು ಮೂರಿದ್ದವು. ಮಂಗಳವಾರ ಅವರನ್ನು ಉಳಿಸಿಕೊಳ್ಳಲು ವೈದ್ಯರ ಒಂದು ತಂಡ ಹರಸಾಹಸ ನಡೆಸಿದರೂ ಪ್ರಯೋಜನವಾಗಲಿಲ್ಲ.
ಮುಂದುವರೆದ ಗಲಭೆ:
ಸೋಮವಾರದಿಂದ ಉಂಟಾಗಿರುವ ಗಲಭೆ ಎರಡನೆ ದಿನವಾದ ಮಂಗಳವಾರಕ್ಕೆ ಕಾಲಿಟ್ಟಿದೆ. ಹೆಗ್ಗನಹಳ್ಳಿ, ರಾಜಗೋಪಾಲನಗರ, ತಿಗಳರಪಾಳ್ಯ, ಮಾಗಡಿ ರಸ್ತೆ, ಸುಂಕದಕಟ್ಟೆ, ಜಾಲಹಳ್ಳಿ ಕ್ರಾಸ್, ಪೀಣ್ಯ ಮತ್ತಿತರ ಕಡೆ ಪ್ರಕ್ಷುಬ್ಧ ಪರಿಸ್ಥಿತಿ ಕೆಲಕಾಲ ಮುಂದುವರಿಯಿತು.
ಕಳೆದೆರಡು ದಿನಗಳಿಂದ ಹೊತ್ತಿ ಉರಿಯುತ್ತಿರುವ ಬೆಂಗಳೂರು ಮತ್ತಿತರ ಪ್ರದೇಶಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಕೇಂದ್ರದಿಂದ 10 ತುಕಡಿ ಅರೆಸೇನಾ ಪಡೆ ಆಗಮಿಸಿದೆ.
ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆ ಪಥಸಂಚಲನ ನಡೆಸಿದರೆ ಸ್ಥಳೀಯ ಪೊಲೀಸರು ಕೂಂಬಿಂಗ್ ನಡೆಸಿದರು. ಡಿಸಿಪಿ ಹರ್ಷ ನೇತೃತ್ವದಲ್ಲಿ ವಜ್ರ ಹಾಗೂ ಬುಲೆಟ್ ಪ್ರೂಫ್ ವಾಹನದಲ್ಲಿ ಕೂಂಬಿಂಗ್ ನಡೆಸಲಾಯಿತು.
ಮುಂದುವರಿದ ಹಿಂಸಾಚಾರ
ಮಂಗಳವಾರ ಬೆಳಗ್ಗೆಯೇ ಬೆಂಗಳೂರಿನಲ್ಲಿ ಹಿಂಸಾಚಾರ ಕಾಣಿಸಿಕೊಂಡಿತ್ತು.ಹೆಗ್ಗನಹಳ್ಳಿಯಲ್ಲಿ ಕೆಲವರು ರಸ್ತೆಯನ್ನು ಬಂದ್ ಮಾಡಿ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರಹಾಕಿದರು. ಮೊದಲೇ ಪ್ರಕ್ಷುಬ್ಧಗೊಂಡಿದ್ದ ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಿದ ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.
ಮೈಸೂರು ರಸ್ತೆಯ ಟಿಂಬರ್ಯಾರ್ಡ್ ನಲ್ಲಿ ಅರ್ಧ ಸುಟ್ಟು ಹಾಕಿದ್ದ ಎಸ್ಆರ್ ಎಸ್ ಬಸ್ ಗೆ ಕೆಲ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಸುಟ್ಟು ಕರಕಲಾಗಿದೆ. ಇನ್ನೊಂದೆಡೆ ಪೀಣ್ಯದ ತಿಗಳರ ಪಾಳ್ಯದಲ್ಲಿ ಲಾರಿಯೊಂದಕ್ಕೆ ಬೆಂಕಿ ಹಚ್ಚಲಾಯಿತು.ನಗರದ 16 ಕಡೆ ಕರ್ಫ್ಯೂ ವಿಧಿಸಲಾಗಿದ್ದು, ಪ್ರತಿಭಟನಾಕಾರರು ಇದನ್ನು ಲೆಕ್ಕಿಸದೆ ಕೆಲವು ವಾಹನಗಳ ಮೇಲೆ ಕಲ್ಲೆಸೆದು ಬೆಂಕಿ ಹಚ್ಚಿದರು.

ಬೆಂಗಳೂರು ಖಾಲಿ ಖಾಲಿ: ಇಂದು ಬಂದ್ ಇಲ್ಲ-ಬೂದಿ ಮುಚ್ಚಿದ ಕೆಂಡದಂತಿರುವ ರಾಜಧಾನಿ

ಬೆಂಗಳೂರಿನ 16 ಸ್ಥಳಗಳಲ್ಲಿ ಕರ್ಫ್ಯೂ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರವೂ ಕೆಲವೆಡೆ  ಬಸ್, ಮೆಟ್ರೋ ಸಂಚಾರ ಇಲ್ಲದೇ ಜನರು ಪರದಾಡುವಂತಾಗಿದೆ. ಸೋಮವಾರ ರಾತ್ರಿ ಪೊಲೀಸ್ ಗುಂಡೇಟಿಗೆ ಯುವಕ ಉಮೇಶ್ ಬಲಿಯಾಗಿರುವ ಘಟನೆಯಿಂದಾಗಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಗಿದೆ. ಯಾವುದೇ ಸಂಘಟನೆಗಳು ಬುಧವಾರ ಬೆಂಗಳೂರು ಬಂದ್ ಗೆ ಕರೆ ಕೊಟ್ಟಿಲ್ಲ ಎಂದು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಸ್ಪಷ್ಟನೆ ನೀಡಿದ್ದಾರೆ.
ಈ ಮಧ್ಯೆ ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ತಾಣಗಳಲ್ಲಿ ಸ್ಪಷ್ಟನೆ ನೀಡಿ, ನಾಳೆ ಯಾವುದೇ ಬಂದ್ ಗೆ ಅನುಮತಿ ಇಲ್ಲ ಎಂದು ಪ್ರಕಟಿಸಿದ್ದಾರೆ.
ಮಹಾನಗರಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ನಗರಕ್ಕೆ ಹೆಚ್ಚುವರಿ ಅರೆಸೇನಾ ಪಡೆಗಳನ್ನು ಕೇಂದ್ರ ಸರ್ಕಾರ ಕಳುಹಿಸಿಕೊಟ್ಟಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಕೈಗಾರಿಕಾ ಭದ್ರತಾ ದಳದ 20 ತುಕಡಿಗಳು ನಗರಕ್ಕೆ ಆಗಮಿಸಿವೆ. ಸಿವಿಎಲ್, ಕ್ಷಿಪ್ರ ಕಾರ್ಯಚರಣಾ ಪಡೆ, ಕೆಎಸ್ಆರ್ ಟಿಸಿ ಸೇರಿದಂತೆ 15 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ನಗರದಲ್ಲಿ ಬಿಎಂಟಿಸಿ ಬಸ್ ಗಳ ಓಡಾಟ ಸಂಪೂರ್ಣ ಸ್ಥಗಿತಗೊಂಡಿದೆ. ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರಗಳಿಗೆ ಕೆಎಸ್ಆರ್ ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ. ತಮಿಳುನಾಡು-ಕರ್ನಾಟಕ ನಡುವೆ ಕೆಎಸ್ಆರ್ ಟಿಸಿ ಬಸ್ ಸಂಚಾರ ಕೂಡಾ ಕೆಲವೆಡೆ ಸ್ಥಗಿತಗೊಂಡಿದೆ. ಮೆಟ್ರೋ ರೈಲುಗಳ ಓಡಾಟ ಎರಡನೇ ದಿನವೂ ರದ್ದಾಗಿದೆ.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಗೃಹ ಸಚಿವ ಪರಮೇಶ್ವರ್ ಮನವಿ ಮಾಡಿಕೊಂಡಿದ್ದು, ಸಾರ್ವಜನಿಕರ ಆಸ್ತಿ, ಪಾಸ್ತಿಗೆ ಹಾನಿ ಮಾಡಿ ಶಾಂತಿಗೆ ಭಂಗ ತಂದರೆ ನಿರ್ಧಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಮನಗರದಲ್ಲಿಯೂ ಪ್ರತಿಭಟನೆ ಜೋರಾಗಿದೆ. ಕನಕಪುರ ತಾಲ್ಲೂಕಿನ ವಡೇರಹಳ್ಳಿಯ ಸಮೀಪದಲ್ಲಿ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪುತ್ರಿ ಸೆಲ್ವಿ ಅವರಿಗೆ ಸೇರಿದ, ಫಾರ್ಮ್ ಹೌಸ್ ಇದೆ. ಈ ಫಾರ್ಮ್ ಹೌಸ್ ಗೆ ರಾಮನಗರ ಜಿಲ್ಲಾ ಸಮತಾ ಸೈನಿಕ ದಳದ ಕಾರ್ಯಕರ್ತರು, ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದಾಗ, ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಮುಖ್ಯದ್ವಾರ ಹತ್ತಿ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ.ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು. ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಕೆಆರ್ ಎಸ್-ಮೈಸೂರು ರಸ್ತೆ ತಡೆದು ಪ್ರತಿಭಟನೆ

ಮಂಡ್ಯ ಜಿಲ್ಲೆಯಲ್ಲೂ ನಿಷೇಧಾಜ್ಞೆ ಜಾರಿಯಿದ್ದರೂ,ಪ್ರತಿಭಟನೆ ಮುಂದುವರೆದಿದ್ದು, ಶ್ರೀರಂಗಪಟ್ಟಣದ ಮಂಟಿ ಗ್ರಾಮದಲ್ಲಿ ಕೆಆರ್ ಎಸ್ ಮೈಸೂರು ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಲಾಗಿದೆ.
400ಕ್ಕೂ ಮಂದಿ ಸೆರೆ:
ಕಾವೇರಿ ಗಲಾಟೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ 400ಕ್ಕೂ ಹೆಚ್ಚು ಮಂದಿ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ತಮಿಳುನಾಡು ಮೂಲದ ಬ್ಯಾಂಕ್ ಗಳ ನಾಮಫಲಕಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕಾವೇರಿ ಗಲಭೆ: ಹೈಕಮಾಂಡ್ ಗೆ ಸಿಎಂ ವಿವರಣೆ

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈ ಕಮಾಂಡ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ನಡೆದ ಘಟನೆಗಳ ಬಗ್ಗೆ, ಮುನ್ನೆಚ್ಚರಿಕಾ ಕ್ರಾಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿರುವ ಬಗ್ಗೆ ಈಗ ಕಾನೂನು ಸುವ್ಯವಸ್ಥೆ ಸುಧಾರಿಸುತ್ತಿರುವ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಸಿಎಂ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿತ್ತು. ನೆರೆ ರಾಜ್ಯದಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆಯೇ ರಾಜ್ಯದಲ್ಲಿ ಆಕ್ರೋಶ ಭುಗಿಲೇಳಲು ಕಾರಣ ಎಂದು ಸಿಎಂ ಹೈ ಕಮಾಂಡ್ ಬಳಿ ಹೇಳಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಪ್ರಧಾನಿ ಮಧ್ಯಪ್ರವೇಶಕ್ಕೆ ಖರ್ಗೆ ಒತ್ತಾಯ

ಕಾವೇರಿ ವಿವಾದದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೇಂದ್ರ ಸರಕಾರ ಚರ್ಚೆ ನಡೆಸಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರ ಅಂತರರಾಜ್ಯ ಜಲ ವಿವಾದವಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಧಾನಿ ಮೋದಿ ಅವರು ಮಧ್ಯ ಪ್ರವೇಶಿಸಿ ವಿವಾದವನ್ನು ಇತ್ಯರ್ಥಗೊಳಿಸಲಿ ಎಂದು ಆಗ್ರಹಿಸಿದರು.
ಈ ಕೂಡಲೇ ಪ್ರಧಾನಿ ಮೋದಿ ಅವರು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಯನ್ನು ಕರೆಸಿ ಚರ್ಚೆಸಬೇಕು. ಮೋದಿ ಅವರು ಮೊದಲು ತಮಿಳುನಾಡು ಸಿಎಂ ಜಯಲಲಿತಾ ಅವರ ಜೊತೆ ಚರ್ಚೆ ನಡೆಸಿ ವಿವಾದಕ್ಕೆ ಅಂತ್ಯ ಹಾಡಲಿ ಎಂದು ಹೇಳಿದರು.
ಶಾಂತಿ ಕಾಪಾಡುವಂತೆ ಮನವಿ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಜನತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ರಾಜ್ಯ ಸರಕಾರಕ್ಕೆ ಸಹಕರಿಸಬೇಕು. ರೈತರ ಹಿತಾಸಕ್ತಿ ಕಾಪಾಡಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಖರ್ಗೆ ಹೇಳಿದ್ದಾರೆ.
Previous Post

ಕಾವೇರಿ ವಿವಾದ: ವೈಯಕ್ತಿಕವಾಗಿ ನೋವುಂಟಾಗಿದೆ: ಪ್ರಧಾನಿ ಮೋದಿ

Next Post

ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ: ಮತ್ತೆ ಕರ್ಫ್ಯೂ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ: ಮತ್ತೆ ಕರ್ಫ್ಯೂ ಜಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!