ಬೆಂಗಳೂರು: ಅ:28: ವಿದ್ಯಾರ್ಥಿನಿಗೆ ಡ್ರಾಪ್ ನೀಡುವ ನೆಪದಲ್ಲಿ ಆಕೆ ಮೇಲೆ ವಿದೇಶಿಯರಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕೆ.ಆರ್.ಪುರಂನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿ ತನ್ನ ಸ್ನೇಹಿತನ ಮನೆಗೆ ತೆರಳಿ ವಾಪಸ್ ಮನೆಗೆ ಹೋಗುವಾಗ ಕಾರಿನಲ್ಲಿ ಬಂದ ಇಬ್ಬರು ಆಕೆಗೆ ಡ್ರಾಪ್ ಕೊಡುವುದಾಗಿ ವಾಹನಕ್ಕೆ ಹತ್ತಿಸಿಕೊಂಡು ನಂತರ ಅತ್ಯಾಚಾರ ವೆಸಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 7ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ವಿದ್ಯಾರ್ಥಿನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೆಆರ್ಪುರಂ ಪೊಲೀಸರು ಇರಾನ್ ಪ್ರಜೆ ಜಲಾಲ್ ಮತ್ತು ಆಫ್ಘಾನಿಸ್ತಾನದ ಮುಕರಮ್ ಎಂಬುವರನ್ನು ಬಂಧಿಸಿದ್ದಾರೆ.
ಈಶಾನ್ಯ ರಾಜ್ಯದ ಸಂತ್ರಸ್ತ ವಿದ್ಯಾರ್ಥಿನಿ ನಗರದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಈಕೆ ಸ್ನೇಹಿತೆಯರ ಜೊತೆ ಕೆ.ಆರ್.ಪುರಂನಲ್ಲಿ ವಾಸವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್.ಪುರಂ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Discussion about this post