Read - < 1 minute
ನವದೆಹಲಿ: ನಿರೀಕ್ಷೆಯಂತೆಯೇ ಅಜಯ್ ಶಿರ್ಕೆ ಬಿಸಿಸಿಐ ಕಾರ್ಯದರ್ಶಿಯಾಗಿ ಮರು ಆಯ್ಕೆಯಾಗಿದ್ದಾರೆ.
ಶಿರ್ಕೆ ಅವರು ಈ ವರ್ಷದ ಜೂನ್ನಲ್ಲಿ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಶಿರ್ಕೆ, ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಮುಖ್ಯಸ್ಥರೂ ಆಗಿದ್ದಾರೆ. ಮುಂಬೈನಲ್ಲಿ ಇಂದು ಅನುರಾಗ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ೮೭ನೆಯ ಬಿಸಿಸಿಐ ವಾರ್ಷಿಕ ಮಹಾಸಭೆಯಲ್ಲಿ ಶಿರ್ಕೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕಾರ್ಯದರ್ಶಿ ಹುದ್ದೆಗೆ ಶಿರ್ಕೆ ಅವರಷ್ಟೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೇ ವೇಳೆ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವರನ್ನು ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕಮಾಡಲಾಗಿದೆ.
ಸರನಾದೀಪ್ ಸಿಂಗ್, ಅಬೆಯ್ ಕುರುವಿಲ್ಲಾ, ಎಸ್. ಬ್ಯಾನರ್ಜಿ, ಚೌಹಾಣ್ ಆಯ್ಕೆ ಸಮಿತಿ ಇತರೆ ಸದಸ್ಯರಾಗಿದ್ದಾರೆ.
Discussion about this post